ಬ್ರಹ್ಮಾವರ:ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ.ಕಿಣಿಯರಬೆಟ್ಟು ನಿವಾಸಿ ಸುಧಾಕರ ಪೂಜಾರಿ(46) ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದುಮಾನಸಿಕವಾಗಿ ನೊಂದು, ಜೀವನದಲ್ಲಿ ಜಿಗುಪ್ಪೆಗೊಂಡು ನಿನ್ನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.