ಕಾರ್ಕಳ :ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಮೀ ಹೆಬ್ಭಾಳ್ಕರ್, ಮತ್ತು ಇಲಾಖೆಯ ತಾಲೂಕು ಅಧಿಕಾರಿಗಳಿಗೆ ಪುರಸಭಾ ಸದಸ್ಯರಾದ ಶುಭದರಾವ್ ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಿ. ಹೆಚ್. ಕೃಷ್ಣಪ್ಪ ಅಂಗನಾಡಿ ಕೇಂದ್ರಕ್ಕೆ ಬೇಟಿ ನೀಡಿ ಆಹಾರ ಪದಾರ್ಥಗಳ ಗುಣಮಟ್ಟದ ಪರಿಶೀಲನೆ ನಡೆಸಿದರು.
ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ಹಾಗೂ ಸಣ್ಣ ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟವನ್ನು ಹೊಂದಿರಬೇಕು ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ ಈ ಬಗ್ಗೆ ಎಚ್ಚರ ವಹಿಸುವಂತೆ ಆಹಾರ ಪದಾರ್ಥ ವಿತರಕರಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಶುಭದರಾವ್, ಪ್ರಭಾರ ಶಿಶು ಅಭಿವೃದ್ಧಿ ಯೋಜನಾದಿಕಾರಿ ಶ್ರೀಮತಿ ಪುಷ್ಪರಾಣಿ ಹೆಚ್. ವಲಯ ಮೇಲ್ವಿಚಾರಕಿ ಶ್ರಿಮತಿ ಉಮಾ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.