ಉಡುಪಿ :ಕಾಂಗ್ರೆಸ್ ಪಕ್ಷದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ಹಮ್ಮಿಕೊಂಡಿತು.
ಜಿಲ್ಲಾ ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್ ತನಕ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಕ್ಷ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದೆ. ಪ್ರಾರಂಭದಲ್ಲಿ ಅಕ್ಕಿ ಪೂರೈಸುವ ಮಾತು ನೀಡಿದ್ದ ಕೇಂದ್ರ ಸರಕಾರ ಬಳಿಕ ಉಲ್ಟಾ ಹೊಡೆದಿದೆ.ಕೇಂದ್ರದ ಮಲತಾಯಿ ಧೋರಣೆ ಇದರಿಂದ ಜಗಜ್ಜಾಹೀರಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಅಕ್ಕಿ ಕೇಳುವುದು ರಾಜ್ಯದ ಹಕ್ಕು. ಆದರೆ ಅದನ್ನು ಪೂರೈಕೆ ಮಾಡದ ಕೇಂದ್ರ ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆದಿದೆ ಎಂದು ಕೈ ಮುಖಂಡರು ಅಸಮಾಧಾನ ಹೊರಹಾಕಿದರು.
ಕಾಂಗ್ರೆಸ್ ಕಾರ್ಯಕರ್ತರು ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಅಕ್ಕಿ ಕೇಳುವುದು ರಾಜ್ಯದ ಹಕ್ಕು. ಆದರೆ ಅದನ್ನು ಪೂರೈಕೆ ಮಾಡದ ಕೇಂದ್ರ ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆದಿದೆ ಎಂದು ಕೈ ಮುಖಂಡರು ಅಸಮಾಧಾನ ಹೊರಹಾಕಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉದಯ ಶೆಟ್ಟಿ, ರಮೇಶ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.