ಮಂಗಳೂರು:ಜೂನ್ 22 ಮತ್ತು 23 ರಂದು ಏಷ್ಯಾದ ಅತಿದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹವು ತಮ್ಮ ನೇಮಕಾತಿ ಸಂದರ್ಶನವನ್ನು ಮಂಗಳೂರಿನಲ್ಲಿ ಏರ್ಪಡಿಸಿದೆ.
ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ ಕಚೇರಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಸಂದರ್ಶನ ನಡೆಯಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಪ್ರವರ್ತಕ ವಿಲ್ಸನ್ ಫೆರ್ನಾಂಡಿಸ್ ಮಾಹಿತಿ ನೀಡಿದರು
ಯುಎಇ, ಕತರ್, ಬಹರೈನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿದೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಟ ವಿದ್ಯಾರ್ಹತೆ ಪಿಯುಸಿ ಆಗಿದೆ. ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್‌ನಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ.
ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ದಿರ್ಹಮ್‌ಗಳಿಂದ 1400 ದಿರ್ಹಮ್ ತನಕ ಮತ್ತು 200 ದಿರ್ಹಮ್ ಆಹಾರ ಭತ್ತೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ. ಸುಮಾರು 400 ಉದ್ಯೋಗ ಅವಕಾಶಗಳಿವೆ ಎಂದರು.
ಈ ಸಂದರ್ಭ ಸಂಸ್ಥೆ ನಿರ್ದೇಶಕಿ ಲೀನಾ ಫೆರ್ನಾಂಡಿಸ್, ಡೈರೆಕ್ಟರ್ ಅಪರೇಶನ್ಸ್ ಥೋಮಸ್ ಆಳ್ವ ಉಪಸ್ಥಿತರಿದ್ದರು.
ಸಂದರ್ಶನ ಕಚೇರಿ ವಿಳಾಸ: ಫೆರ್ನಾಂಡಿಸ್ ಗ್ರೂಪ್, ಮೆಟ್ರೋ ಪ್ಲಾಝಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟ್ ಎದುರುಗಡೆ, ವೆಲೆನ್ಸಿಯಾ, ಮಂಗಳೂರು