ಉಪ್ಪೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ರಿ. ಉಡುಪಿ.ಇದರ ಉಪ್ಪೂರು ವಲಯದ ಜಾತಾಬೆಟ್ಟು ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ದಿನಾಂಕ 18 ರ ರವಿವಾರ ಉಪ್ಪೂರು ಚಿತ್ತಾರಿ ಶ್ರೀ ಮಹಾಬಲೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಓಕ್ಕೂಟದ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಪದಗ್ರಹಣದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಅವಿನಾಶ್, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಶ್ರೀ ಶಿವರಾಯ ಪ್ರಭು, ಜನಜಾಗೃತಿ ಉಪ್ಪೂರು ವಲಯ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿ, ಶಿಕ್ಷಕರಾದ ಶ್ರೀ ಜಯಪ್ರಕಾಶ್ ಕುಮಾರ್, ಗಣ್ಯರಾದ ಶ್ರೀ ಕರುಣಾಕರ ಯು, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶೋಭಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.