ಮಂಗಳೂರು : ಜೂನ್ 23 ರಂದು ಬಹುನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆ ಎಂದು ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
“ಸರ್ಕಸ್ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಬರುತ್ತಿದ್ದೇನೆ. ತುಳು ರಂಗಭೂಮಿಯ ಹಿರಿಯ ಕಲಾವಿದರ ಜೊತೆ ನಟಿಸಿರುವುದು ತುಂಬಾ ಖುಷಿ ಕೊಟ್ಟಿದೆ. ಬಾಲ್ಯದಲ್ಲಿ ಅವರ ನಾಟಕಗಳನ್ನು ನೋಡಲು ಕಿಮೀಗಟ್ಟಲೆ ನಡೆಯುತ್ತಿದ್ದೆ, ಇಂದು ಅವರ ಜೊತೆ ನಟಿಸಿದ್ದೇನೆ” ಎಂದು ಯಶ್ ಶೆಟ್ಟಿ ಅವರು ಹೇಳಿದರು
“ಸರ್ಕಸ್ ತುಳು ಚಿತ್ರದಲ್ಲಿ ಹಾಸ್ಯಕ್ಕೆ ಬಹಳಷ್ಟು ಪ್ರಾಧಾನ್ಯತೆಯಿದೆ. ಇದು ತುಳುನಾಡು ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಸದ್ದು ಮಾಡಲಿದೆ. ರೂಪೇಶ್ ಶೆಟ್ಟಿ ಅವರು ಈ ಚಿತ್ರದಲ್ಲಿ ಕಷ್ಟಪಟ್ಟು ದುಡಿದಿದ್ದಾರೆ. ಅವರ ಶ್ರಮ ಸಾರ್ಥಕವಾಗಲು ನೀವೆಲ್ಲರೂ ಸಿನಿಮಾ ನೋಡಬೇಕು” ಎಂದು .ಕುಸೇಲ್ದರಸೆ ನವೀನ್ ಡಿ. ಪಡೀಲ್ ಹೇಳಿದರು
ಅರವಿಂದ್ ಬೋಳಾರ್ ಮಾತಾಡುತ್ತ, “ಸರ್ಕಸ್ ಸಿನಿಮಾದಲ್ಲಿ ಹಾಸ್ಯದ ಜೊತೆ ಫ್ಯಾಮಿಲಿ ಕುಳಿತು ನೋಡುವಂತಹ ಚಂದದ ಕಥೆಯಿದೆ. ಎಲ್ಲರೂ ಸಿನಿಮಾ ಥಿಯೇಟರ್ ನಲ್ಲಿ ಬಂದು ನೋಡಿ ಸಿನಿಮಾವನ್ನು ಗೆಲ್ಲಿಸಿ” ಎಂದು .ಅರವಿಂದ್ ಬೋಳಾರ್ ಹೇಳಿದರು
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ಅತ್ತಾವರ, ರೂಪೇಶ್ ಶೆಟ್ಟಿ, ಯಶ್ ಶೆಟ್ಟಿ, ರಚನಾ ರೈ, ಅರವಿಂದ್ ಬೋಳಾರ್, ನವೀನ್ ಡಿ. ಪಡೀಲ್, ಪ್ರಸನ್ನ ಶೆಟ್ಟಿ ಬೈಲೂರು, ಸಿನಿಮಾ ಹಂಚಿಕೆದಾರ ಸಚಿನ್ ಎ. ಎಸ್. ಉಪ್ಪಿನಂಗಡಿ, ಲೋಯ್ ಸಲ್ದಾನ, ನವೀನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.