ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಯುವತಿಯೊಬ್ಬಳು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲಾ ಘಟಕ ನಾಳೆ ಪ್ರತಿಭಟನೆ ಹಮ್ಮಿಕೊಂಡಿದೆ. ಜೂನ್ 23 ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆ ಮುಂಭಾಗ ಸಾವನ್ನಪ್ಪಿದ ಯುವತಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದೆ.
ಕಾಪು ತಾಲೂಕಿನ ಎಲ್ಲೂರಿನ ಕೇಮುಂಡೇಲು ನಿವಾಸಿ ಅದಮಾರು ಜನಾರ್ಧನ ಶೋಭಾ ದಂಪತಿಗಳ ಏಕೈಕ ಪುತ್ರಿ ನಿಖಿತಾ ಕುಲಾಲ್ ಸಾವನ್ನಪ್ಪಿದ ಯುವತಿ, ನಿಖಿತಾ ಮನೆಯಲ್ಲಿ ನೀರವ ಮೌನ ಮತ್ತು ದುಖ: ಮುಗಿಲು ಮುಟ್ಟಿದೆ ಸಾಮಾಜಿಕ ಜಾಲತಾಣಗಳಲ್ಲಿ ನಿಖಿತಾ ಸಾವಿಗೆ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆಯ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.