ಬೆಂಗಳೂರು: ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವಂತ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂಬುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಮೇಲೆ ಪೊಲೀಸ್ ಇಲಾಖೆಯಿಂದ ವಿಶೇಷ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಆದ್ಯತೆಯಂತ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ನಗರದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುತ್ತದೆ. ಸಾರ್ವಜನಿಕರೊಂದಿಗೆ ಪೊಲೀಸರು ಸೌಜನ್ಯ ಯುತವಾಗಿ ನಡೆದುಕೊಳ್ಳುವಂತೆ ತಿಳಿಸಿದರು.
ಇದೇ ವೇಳೆ ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ದೂರವಾಣಿ ಸಂಖ್ಯೆಗಳ ನಾಮಫಲಕ ಅಳವಡಿಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.