ಕಾರ್ಕಳ : ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಜೂನ್ 26 ರಿಂದ ಸೆಪ್ಟೆಂಬರ್ ಅಂತ್ಯದವರೆಗೆ ಪರಶುರಾಮ ಥೀಂ ಪಾರ್ಕ್ ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.