ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಅವಾರ್ಡ್ ನೀಡಿ ಗೌರವಿಸಲಾಗಿದೆ.
‘ಕಾಂತಾರ’ ಸಿನಿಮಾ ಯಶಸ್ಸಿನ ಬಳಿಕ ಅವರು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿಗೆ ಸಾಕಷ್ಟು ಪ್ರಶಸ್ತಿಗಳು ಒಲಿದಿವೆ. ವಿಶೇಷ ಎಂದರೆ ಇದೀಗ ’ವಿಶ್ವ ಶ್ರೇಷ್ಠ ಕನ್ನಡಿಗ 2023′ ಪ್ರಶಸ್ತಿ ದೊರೆತಿದೆ. ಇದನ್ನು ಸ್ವೀಕರಿಸಲು ಪತ್ನಿ ಪ್ರಗತಿ ಶೆಟ್ಟಿಜೊತೆ ಅಮೆರಿಕದ ವಾಷಿಂಗ್ಟನ್ನ ಸಿಯಾಟಲ್ಗೆ ಭೇಟಿ ನೀಡಿದ್ದಾರೆ.
ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಅವಾರ್ಡ್ ನೀಡಿ ಗೌರವಿಸಲಾಗಿದೆ.
ವಾಷಿಂಗ್ಟನ್ನ ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು
ಈಗ ಅದ್ದೂರಿ ಕಾರ್ಯಕ್ರಮದಲ್ಲಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆನೆಟರ್ ಡಾ. ದೆರೀಕ್ ಟ್ರಸ್ಫರ್ಡ್ ಹಾಜರಿ ಹಾಕಿದ್ದರು. ಈ ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿದ್ದರು.