ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂತೆಕಟ್ಟೆ ಕಳ್ತೂರು.ಇದರ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ನೋಟ್ ಬುಕ್ ಹಾಗೂ ಶಾಲೆಗೆ ಕಂಪ್ಯೂಟರ್ ಹಸ್ತಾಂತರ ಸಮಾರಂಭ ವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಕಳ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಕನ್ಯಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ನರಸಿಂಹ ನಾಯಕ್ ಸಂತೆಕಟ್ಟೆ, ಪಂಚಾಯತ್ ಸದಸ್ಯರಾದ ಶ್ರೀ ಆದರ್ಶ ಶೆಟ್ಟಿ, ಶ್ರೀಮತಿ ಉಷಾ ಸುರೇಶ್ ಪೂಜಾರಿ, ನಾಗೇಶ್ ನಾಯ್ಕ್, ಚಂದ್ರ ಶೇಖರ್ ಶೆಟ್ಟಿ ಗಣ್ಯರಾದ ಶ್ರೀ ರಮಾಕಾಂತ್ ಕಾಮತ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ರಾಜೇಶ್ ಪೂಜಾರಿ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.