2024ರ ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ ಪಿ ನಡ್ಡಾ ಜೀ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್ ಜೀ ಯವರ ನೇತೃತ್ವದಲ್ಲಿ ಆಯೋಜಿಸಿದ್ದ ಮೋರ್ಚಾಗಳ ಸಂಯುಕ್ತ ಸಭೆ ಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಸಿಂಗ್, ಶ್ರೀ ಸಿ. ಟಿ. ರವಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಕೆ. ಲಕ್ಷ್ಮಣ್, ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ತೇಜಸ್ವಿ ಸೂರ್ಯ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.