ಕಾಪು:ಕಾಪುವಿನ ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಸ್ಕೊರೆತ ಪ್ರದೇಶಕ್ಕೆ ನಿನ್ನೆ ಸಂಜೆ ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಲು ಸೂಚನೆ ನೀಡಿದರು.
ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಮಾಂಕಾಳ ಎಸ್ ವೈದ್ಯ, ಕಾಮಗಾರಿಯು ಕಳೆದ ಮೂರು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿರುವ ಮಾಹಿತಿ ಸಿಕ್ಕಿದೆ. ಕಾಮಗಾರಿ ವಿಳಂಬ ಆದ ಬಗ್ಗೆ ಸ್ಥಳೀಯರು ದೂರಿಕೊಂಡಿದ್ದಾರೆ. ನಿಲುಗಡೆಗೊಂಡ ಕಾಮಗಾರಿಯನ್ನು ತುರ್ತಾಗಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಸ್, ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಆರ್ ಐ ಸುಧೀರ್ ಕುಮಾರ್ ಶೆಟ್ಟಿ, ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕರುಣಾಕರ ಪೂಜಾರಿ, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ಯು ಸಿ ಸೇಕಬ್ಬ, ಸುನೀಲ್ ಬಂಗೇರಾ ಕಟಪಾಡಿ, ದಿನೇಶ್ ಪಲಿಮಾರು, ಅಶ್ವಿನಿ, ವಿಶ್ವಾಸ್ ಅಮೀನ್ ಹಾಗೂ ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.