ಬೆಂಗಳೂರು :ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ ವಿಧಾನ ಮಂಡಲದ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಇಂದು ಭಾಷಣ ಮಾಡಿದರು.
ಭ್ರಷ್ಟಾಚಾರದ ಕೆಲಸ ಪಿಡುಗನ್ನು ಸಮರ್ಥವಾಗಿ ಎದುರಿಸಿ ನಿರ್ಮೂಲನೆ ಮಾಡಲು ಆಡಳಿತಾತ್ಮಕ ಮತ್ತು ಶಾಸಕಾಂಗ ಕ್ರಮಗಳನ್ನು ನನ್ನ ಸರ್ಕಾರ ಕೈಗೊಂಡಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರನ್ನು ಬರಮಾಡಿಕೊಂಡರು. ವಿಧಾನಸಭಾಧ್ಯಕ್ಷರಾದ ಯು ಈ ಸಂದರ್ಭದಲ್ಲಿ ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು. ಆರಂಭದಲ್ಲಿ ರಾಜ್ಯಪಾಲರು ಕನ್ನಡದಲ್ಲಿ ಭಾಷಣ ಮಾಡಿದರು. ಬಸವಣ್ಣನವರ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಎಲ್ಲಾ ಸಮುದಾಯಗಳ ಪರವಾಗಿ ಸರ್ಕಾರ ಕಾರ್ಯ ನಿರ್ವಹಣೆ ಮಾಡುತ್ತದೆ. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದ ತತ್ವದಡಿ ಕೆಲಸ ಮಾಡುತ್ತಿದೆ.
ಭ್ರಷ್ಟಾಚಾರದ ಪಿಡುಗನ್ನು ಸಮರ್ಥವಾಗಿ ಎದುರಿಸಿ ನಿರ್ಮೂಲನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕ ಮತ್ತು ಶಾಸಕಾಂಗ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯಪಾಲರು ಹೇಳಿದರು.
ಭ್ರಷ್ಟಾಚಾರವನ್ನು ಬೇರು ಸಮೇತ ತೆಗೆದುಹಾಕಲು ಪ್ರತಿಯೊಬ್ಬ ಸದಸ್ಯರ ಸಹಕಾರ ಅತ್ಯಗತ್ಯ ಎಂದು ಉಭಯ ಸದನದ ಸದಸ್ಯರನ್ನು ಮನವಿ ಮಾಡಿದರಲ್ಲದೆ, ಇದರಲ್ಲಿ ಯಶಸ್ವಿಯಾಗೋಣ ಎಂದರು.
ಇದರ ಜತೆಯಲ್ಲಿಯೇ ರಾಜ್ಯ ಸರ್ಕಾರವು ಆರ್ಥಿಕ ಹೊರೆಯಿಂದ ಹೊರಬರುವುದು ಆದ್ಯತಾ ವಲಯವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಸಾಕಷ್ಟು ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ ಇಂದು ಆರ್ಥಿಕ ಮುಗ್ಗಟ್ಟಿನ ಸ್ಥಿತಿಗೆ ತಲುಪಿದೆ. ಈ ಆರ್ಥಿಕ ಮುಗ್ಗಟ್ಟಿನಿಂದ ರಾಜ್ಯವನ್ನು ಹೊರತರುವುದು ಆದ್ಯತಾ ವಲಯಗಳಲ್ಲಿ ಒಂದಾಗಿದೆ ಎಂದು ಗೆಲ್ಲೋಟ್ ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಪ್ರತಿ ಕುಟುಂಬಕ್ಕೆ ಐದು ಕೆಜಿ ಅಕ್ಕಿ ಹಂಚಿಕೆ ಮಾಡಲಿದೆ. ಸದ್ಯ ನೇರವಾಗಿ ಬಿಪಿಎಲ್ ಕುಟುಂಬಗಳ ಸದಸ್ಯರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರತಿತಿಂಗಳು ಪ್ರತಿ ಕೆಜಿ 34 ರೂಪಾಯಿಯಂತೆ ಹಣ ಹಾಕಲಾಗುವುದು ಎಂದು ರಾಜ್ಯಪಾಲರು ಹೇಳಿದರು.
ಅದೇ ರೀತಿಯಲ್ಲಿ ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್ ಯೋಜನೆಗಳಿಂದ ರಾಜ್ಯದ ಜನರನ್ನು ಸರ್ಕಾರ ಹಸಿವು ಮುಕ್ತರನ್ನಾಗಿ ಮಾಡಲಿದೆ, ಹಾಗೆಯೇ ಯುನಿಧಿ ಯೋಜನೆಯಡಿ ನಿರುದ್ಯೋಗಿಗಳಿಗೆ ಹಣ ನೀಡಲು ಸರ್ಕಾರ ಮುಂದಾಗಿದೆ ಎಂದರು. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು, ಇದರಿಂದ 2.14 ಕೋಟಿ ಕುಟುಂಬಕ್ಕೆ ಅನುಕೂಲವಾಗಲಿದೆ. ಗೃಹ ಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ ಎರಜು ಸಾವಿರ ರೂಪಾಯಿ ಅವರ ಖಾತೆಗೆ ಹಾಕಲಾಗುವುದು, ಇದರಿಂದ ಆರ್ಥಿಕ ಹಿಂದುಳಿದವರು ಮತ್ತು ಬಡವರ ಪರ ಸರ್ಕಾರ ಕೆಲಸ ಮಾಡುತ್ತದೆ ಎಂದು ರಾಜ್ಯಪಾಲರು ಹೇಳಿದರು.
16ನೇ ವಿಧಾನಸಭೆ ಅಧಿವೇಶನ ಒಟ್ಟು ಹತ್ತುದಿನಗಳ ನಡೆಯಲಿದೆ. ಜುಲೈ 7ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ.