ಕಾಪು:ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬಡಾ ಎರ್ಮಾಳು ಗ್ರಾಮದ ತಿಯಾ ಭಜನಾ ಮಂದಿರದ ಬಳಿಯ ನಿವಾಸಿ ರಮೇಶ (55) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇವರು ಕಾಪುವಿನ ಬಡಾ ಎರ್ಮಾಳು ಗ್ರಾಮದ ಬಾರ್‌ವೊಂದರಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದು, ನಿನ್ನೆ ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದ ಚಾಲಕ ನಝೀರ್ ಹುಸೇನ್ ಎಂಬಾತ ರಸ್ತೆ ಬದಿ ನಿಂತಿದ್ದ ರಮೇಶ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ.
ಪರಿಣಾಮ ರಸ್ತೆಗೆಬಿದ್ದು ಗಂಭೀರ ಗಾಯಗೊಂಡ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದಾಗ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂಬುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.