ಉಡುಪಿ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು . ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮಳೆ ತೀವ್ರತೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ಅಂದರೆ ಜುಲೈ 5ರಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ .