ಬೆಂಗಳೂರು:ಸಂಚಾರಿ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿ ದಾಖಲಾಗಿರುವಂತ ದಂಡದಲ್ಲಿ ಮತ್ತೆ ಶೇ.50ರಷ್ಟು ರಿಯಾಯಿತಿ ಮುಂದುವರೆಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ.50ರಷ್ಟು ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಲು ಮತ್ತೊಮ್ಮೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ವಾಹನದ ಸವಾರರಿಗೆ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ನೀಡಲಾಗಿತ್ತು. ಹೀಗಾಗಿ ಕೋಟಿ ಕೋಟಿ ಹಣ ದಂಡದ ರೂಪದಲ್ಲಿ ಸಂಗ್ರಹವಾಗಿತ್ತು. ಈಗ ಮತ್ತೆ ಶೇ.50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.