ಉಡುಪಿ :ಉಡುಪಿ ನಗರದ ಬಹುತೇಕ ಪ್ರದೇಶಗಳು ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ಥ ಗೊಂಡಿದೆ.
ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಮಠ ಪಾರ್ಕಿಂಗ್ ಆಸುಪಾಸಿನ ಪ್ರದೇಶ ಬೈಲಕರೆ ಹಾಗೂ ಕಲ್ಸಂಕ ಬಳಿಯ ಹಲವು ಮನೆಗಳು ನೀರಿನಲ್ಲಿ ಜಲಾವ್ರತ ಗೊಂಡಿದೆ
ಮನೆ, ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿದೆ. ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ
ಬೈಲಕೆರೆ ಮೂಡನಿಡಂಬೂರು ಕೊಡವೂರು ನಿಟ್ಟೂರು, ಕಲ್ಸಂಕ ತೆಂಕಪೇಟೆ ಸೇರಿ ಹಲವು ಪ್ರದೇಶಗಳಲ್ಲಿ ನೆರೆ ಕಂಡು ಬಂದಿದ್ದು ನೂರಾರು ಮನೆಗಳು ಜಲಾವೃತವಾಗಿವೆ.
ಬೆಳಗಿನ ಜಾವ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಕೂಡಲೇ ಮಾಹಿತಿ ತಿಳಿದ ಅಗ್ನಿಶಾಮಕ ದಳ ಹಾಗೂ ಉಡುಪಿ ನಗರಸಭೆ ಕಾರ್ಯಪಡೆ ಸ್ಥಳಕ್ಕೆ ಆಗಮಿಸಿ ಬೋಟಿನ ಮೂಲಕ ಹಾಗೂ ಹಗ್ಗದ ಸಹಾಯದಿಂದ ಮನೆ ಮಂದಿಯನ್ನು ರಕ್ಷಿಸುವ ಕಾರ್ಯ ನಡೆಸಿದ್ದಾರೆ. ಇವರೊಂದಿಗೆ ಸ್ಥಳೀಯರು ಕೂಡ ಕೈಜೋಡಿಸಿದ್ದಾರೆ ಎಂದು ತಿಳಿದು ಬಂದಿದೆ.