ಕಾರ್ಕಳ : ಒಂದು ವಾರದಿಂದ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಪುರಸಭೆಯ ವ್ಯಾಪ್ತಿಯಲ್ಲಿ ಬಹುತೇಕ ಚರಂಡಿಗಳು ಮುಚ್ಚಿ ಹೋಗಿರುವ ಹಿನ್ನೆಲೆಯಲ್ಲಿ, ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ಅಲ್ಲಲ್ಲಿ ಹೊಂಡ ನಿರ್ಮಾಣವಾಗಿದೆ.ಚರಂಡಿ ಮತ್ತು ರಸ್ತೆ ಸರಿಪಡಿಸುವಂತೆ ಪುರಸಭೆ ಆಡಳಿತಾಧಿಕಾರಿಯವರಿಗೆ ಕಾರ್ಕಳ ನಗರ ಬಿಜೆಪಿ ಮನವಿ ಮಾಡಿದೆ.
ವಾರಾಹಿ ಪೈಪ್‌ಲೈನ್ ಹಾದು ಹೋಗುವಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳ ಬವಣೆ ಹೇಳತೀರದು. ಜನ ಸಂಚಾರ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದು ಹೀಗೆ ಮುಂದುವರೆದರೆ ನಗರದಲ್ಲಿ ಕೃತಕ ನೆರೆ ಉಂಟಾಗುವ ಸಂಭವ ಇರುವುದರಿಂದ, ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ನಗರ ಬಿಜೆಪಿ ಅಧ್ಯಕ್ಷ ರವೀಂದ್ರ ಮೊಯ್ಲಿ, ಉಪಾಧ್ಯಕ್ಷ ಯೋಗೀಶ್ ನಾಯಕ್, ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್, ಅವಿನಾಶ್ ಶೆಟ್ಟಿ, ಪ್ರಸನ್ನ ಕಾರ್ಕಳ ಮತ್ತಿತರು ಇದ್ದರು.