ಮಾಳ : ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಳ ಇವರ ನೇತೃತ್ವದಲ್ಲಿ ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಡಾಕ್ಟರ್ ದಿಶಾ ಇವರು ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ಹಾಗೂ ವಿವರವಾಗಿ ತಿಳಿಸಿದರು.
ಇವರ ಜೊತೆಗೆ ಆರೋಗ್ಯ ಸಹಾಯಕಿ ನಂದಿನಿ ಆಶಾ ಕಾರ್ಯಕರ್ತೆ ವಿನುತಾ ಇವರು ಉಪಸ್ಥಿತರಿದ್ದರು.ಶಿಕ್ಷಕಿ ರಕ್ಷಿತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.