ಕಾಪು :ಕಾಪು ಬೀಚ್ ತೀರದಲ್ಲಿ ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದ್ದು, ಇದರಿಂದಾಗಿ ಲೈಟ್ ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟವಾಗಿದೆ.ಹೀಗಾಗಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶವನ್ನು ನಿರ್ಬಂಧಿಸಲಾಗಿದೆ
ಕೆಲವು ಪ್ರವಾಸಿಗರು ಮೆಟ್ಟಿಲುಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು ಯತ್ನಿಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆ ಪ್ರದೇಶಕ್ಕೆ ಹೋಗುವುದನ್ನೇ ನಿರ್ಬಂಧಿಸಿ ಹಗ್ಗ ಕಟ್ಟಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಲೈಟ್ ಹೌಸ್ ಗೆ ಬೀಗ ಜಡಿಯಲಾಗಿದ್ದು, ಪ್ರವಾಸಿಗರಿಗೆ ಅವಕಾಶ ನಿರಾಕರಿಸಲಾಗಿದೆ.