ಬಿಸಿಯೂಟ ನೌಕರರನ್ನು ಡಿ ಗ್ರೂಫ್ ಗೆ ಸೇರಿಸಿ – ಪ್ರತಿಭಟನೆ
ರಾಜ್ಯದ 1 ಲಕ್ಷ 17 ಸಾವಿರ ಮಹಿಳೆಯರು 58 ಲಕ್ಷ 39 ಸಾವಿರ ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಶಾಲೆಯಲ್ಲಿ ನೀಡುವ ಎಲ್ಲಾ ಕೆಲಸ ನಿರ್ವಹಿಸುವ ಬಿಸಿಯೂಟ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ನೌಕರರು ನಿನ್ನೆ ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕನಿಷ್ಟ ಕೂಲಿ 21 ಸಾವಿರ ನೀಡಬೇಕು, ಬಿಸಿಯೂಟ ನೌಕರರನ್ನು ಶಿಕ್ಷಣ ಇಲಾಖೆಯಡಿ ತರಬೇಕು, ಬಜೆಟ್‌ನಲ್ಲಿ ಘೋಷಿಸಿದ್ದ 1, 000 ರೂಪಾಯಿ ಗೌರವಧನ ಹೆಚ್ಚಳ ಮಾಡಬೇಕು,
ಅಕ್ಷರ ದಾಸೋಹ ಮಾರ್ಗದರ್ಶಿ ಕೈಪಿಡಿಯಲ್ಲಿ 6 ಗಂಟೆ ಕೆಲಸ ಎಂದು ತಿದ್ದುಪಡಿ ಮಾಡಬೇಕು. ನಿವೃತ್ತಿ ಹೊಂದಿದ ಮತ್ತು ಹೊಂದುತ್ತಿರುವ ನೌಕರರಿಗೆ ಇಡುಗಂಟು ಜ್ಯಾರಿ ಮಾಡಬೇಕು.
ಈ ನೌಕರರಿಗೆ 1 ಲಕ್ಷ ಪರಿಹಾರ ನೀಡಲು ಆದೇಶಿಸಬೇಕು, ಯೋಜನೆಯ ಪ್ರಾರಂಭದಿಂದಲೂ ಸಾದಿಲ್ವಾರು ಜವಾಬ್ದಾರಿಯನ್ನು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಮುಖ್ಯ ಅಡುಗೆಯವರು ನಿರ್ವಹಿಸಬೇಕು.
ಬೇಸಿಗೆ ಮತ್ತು ದಸರಾ ರಜೆಗಳ ವೇತನ ನೀಡಬೇಕು. ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ನೀಡಬಾರದು. ಪ್ರತಿ ಶಾಲೆಯಲ್ಲಿ 2 ಜನ ಅಡುಗೆಯವರು ಇರಲೇಬೇಕು.
ಬಿಸಿಯೂಟ ನೌಕರರನ್ನು ‘ಡಿ’ ಗ್ರೂಪ್ ನೌಕರರನ್ನಾಗಿ ಪರಿಗಣಿಸಬೇಕು ಎಂಬುದಾಗಿ ತಾಲೂಕು ಪಂಚಾಯತ್ ಇ. ಒ ಭಾರತಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.