ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 14ರಂದು ಬೆಳಿಗ್ಗೆ 11. 00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾ ಸಂಪರ್ಕ ಅಭಿಯಾನ’ದ ಕರ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.