ಉಡುಪಿ : ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, ಎಂ. ಟೆಕ್, ಬಿ. ಇ ಹಾಗೂ ಎಂ. ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು, ಉಡುಪಿ : 0820-2950101, . Jo: 9880510585, ಇ-ಮೇಲ್ gttcudupi@gmail. Com ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.