ಬ್ರಹ್ಮಾವರದ ಹಾರಾಡಿ ಹಾಗೂ ಕುಂದಾಪುರದ ಹೆಮ್ಮಾಡಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಸಂಬಂಧ, ಜುಲೈ 21 ರ ಸಂಜೆ 5 ಗಂಟೆಯಿಂದ ಜುಲೈ 23 ರ ಸಂಜೆ 5 ಗಂಟೆಯವರೆಗೆ ಸದ್ರಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಒಣದಿನಗಳೆಂದು ಘೋಷಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿದ್ದಾರೆ.