ಶಾಲಾ ಶಿಕ್ಷಣ ಇಲಾಖೆಯು ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆ ಸಲ್ಲಿಸಿರುವ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಅರ್ಜಿಯನ್ನು ಸಲ್ಲಿಸಬಹುದು
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಜು.31ರ ವರೆಗೆ ಶಿಕ್ಷಣ ಇಲಾಖೆ ವೆಬ್‌ಸೈಟ್ http://www.schooleducation.kar.nic.in ನಲ್ಲಿ ಸಲ್ಲಿಸಬಹುದು.
ಶಿಕ್ಷಕರ ವೈಯಕ್ತಿಕ, ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರದಲ್ಲಿನ ಸಾಧನೆಗಳನ್ನು ಒಳಗೊಂಡ ಸಮಗ್ರ ಮಾಹಿತಿಯನ್ನು ಕಳೆದ 5 ವರ್ಷಗಳ ಅಂಕಿ-ಅಂಶಗಳನ್ನು ಸಲ್ಲಿಸಬೇಕು. ಈಗಾಗಲೇ ಒಂದು ಬಾರಿ ಪ್ರಶಸ್ತಿ ಪಡೆದಿರುವವರು ಹಾಗೂ ಗಂಭೀರ ಆರೋಪ, ಇಲಾಖೆ ವಿಚಾರಣೆ, ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರು ಆರ್ಹರಾಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.