ಬೆಂಗಳೂರು: ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ.
ನಮ್ಮ ರಾಜ್ಯದಲ್ಲಿರುವ ಎಲ್ಲ ಮುಜರಾಯಿ ಇಲಾಖಾ ದೇವಸ್ಥಾನಗಳಲ್ಲಿ ಭಕ್ತಾದಿಗಳು ಇನ್ನುಮುಂದೆ ಮೊಬೈಲ್‌ಗಳನ್ನು ಬಳಕೆ ಮಾಡುವಂತಿಲ್ಲ. ದೇವಸ್ಥಾನ ಪ್ರವೇಶಕ್ಕೂ ಮುನ್ನವೇ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಬೇಕು. ದೇವಸ್ಥಾನದೊಳಗೆ ಮೊಬೈಲ್‌ನಲ್ಲಿ ಮಾತನಾಡುವುದು, ಹಾಡು ಕೇಳುವುದು ಹಾಗೂ ಫೋಟೋ ತೆಗೆಯುವ ಮತ್ತು ತರಹೇವಾರಿ ರೀಲ್ಸ್ ಮಾಡುವುದಕ್ಕೆ ಮೊಬೈಲ್ ಬಳಕೆ ನಿಷೇಧದ ಮೂಲಕ ನಿರ್ಬಂಧ ಹೇರಲಾಗಿದೆ.
ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು. ಈಗ ಅಧಿಕೃತವಾಗಿ ಮೊಬೈಲ್ ಫೋನ್ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ