ಉಡುಪಿ: ಬೈಂದೂರು ತಾಲೂಕಿನ ಪ್ರಸಿದ್ಧ ತ್ರಾಸಿ ಬೀಚ್ ನಲ್ಲಿ ಪ್ರವಾಸಿಗರೊಬ್ಬರು ನೀರುಪಾಲಾದ ಘಟನೆ ಇಂದು ಮಧ್ಯಾಹ್ನ 2.45 ರ ಸುಮಾರಿಗೆ ಘಟನೆ ಸಂಭವಿಸಿದೆ.
ಗದಗ ಜಿಲ್ಲೆಯ ಪೀರ್‌ನದಾಫ್ ಎಂಬುವವರು ನೀರು ಪಾಲಾದ ವ್ಯಕ್ತಿ. ಇವರು ಸಮುದ್ರದ ನೀರಿಗೆ ಇಳಿದಿದ್ದು ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಸ್ಥಳೀಯ ಸಮಾಜಸೇವಕರು, ಅಗ್ನಿಶಾಮಕ ದಳ ಮತ್ತು ಪೊಲೀಸರು ಇವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈತನಕ ನೀರುಪಾಲಾದ ವ್ಯಕ್ತಿ ಪತ್ತೆಯಾಗಿಲ್ಲ ಎನ್ನಲಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ