ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ, ಡಾ. ಹೆಚ್. ಸಿ. ಮಹದೇವಪ್ಪ, ರಹೀಂ ಖಾನ್, ಬೈರತಿ ಸುರೇಶ್ ಮತ್ತು ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಬಡತನ ರೇಖೆಗಿಂತ ಕೆಳಗಿರುವ ಬಡತನ ರೇಖೆಗಿಂತ ಮೇಲಿರುವ ಮತ್ತು ಅಂತ್ಯೋದಯ ಕಾರ್ಡ್‌ಗಳಲ್ಲಿ ಮನೆ ಮುಖ್ಯಸ್ಥರಾಗಿ ಹೆಸರನ್ನು ನಮೂದಿಸಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆ. ಆದಾಯ ತೆರಿಗೆ ಪಾವತಿಸುವ ಮಹಿಳೆಯರು ಮತ್ತು ಪತಿಯು ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಂಥವರ ಪತ್ನಿಯರು ಯೋಜನೆಗೆ ಅರ್ಹರಲ್ಲ.
ಗೃಹಲಕ್ಷ್ಮಿಯರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ಸರ್ಕಾರಿ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸ್ವೀಕರಿಸಲಾಗುತ್ತೆ.
ಅರ್ಜಿ ಹಾಕಲು ಯಾವುದೇ ಮಧ್ಯವರ್ತಿಗಳ ಮೊರೆಹೋಗುವ ಅಗತ್ಯವಿಲ್ಲ. ಗೊಂದಲವಿದ್ದರೆ 1902 ನಂಬರ್ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.