ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ,ಜು.21ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜು.20ರಿಂದ ಜು.23ರವರೆಗೆ, ಬೆಳಗಾವಿ, ಕಲಬುರಗಿ, ಬೀದರ್‌ನಲ್ಲಿ ಜು.23ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.