ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ನೀರು ಶುದ್ದೀಕರಣ ಘಟಕದಲ್ಲಿ ಕ್ಲುಬಿಕಲ್ ಮೀಟರ್, ಟ್ಯಾಂಕ್ ಕ್ಲೀನಿಂಗ್ ಹಾಗೂ ಗೇಟ್ ವಾಲ್ಸ್ ಫಿಕ್ಸಿಂಗ್ ಇತ್ಯಾದಿ ಕೆಲಸಗಳನ್ನು ನಿರ್ವಹಿಸಬೇಕಾಗಿರುವುದರಿಂದ, ಜುಲೈ 21 ರ ಬೆಳಗ್ಗೆ 6 ರಿಂದ ಜು. 22 ರ ಬೆಳಗ್ಗೆ 6 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.