ಬ್ರಹ್ಮಾವರದ ಹಾರಾಡಿ ಹಾಗೂ ಕುಂದಾಪುರದ ಹೆಮ್ಮಾಡಿ ಗ್ರಾಮ ಪಂಚಾಯತ್‌ನ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23 ರಂದು ಮತದಾನ ನಡೆಯಲಿರುವ ಹಿನ್ನೆಲೆ,ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ, ಸದ್ರಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿರುತ್ತಾರೆ.