ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಗೌರವ ಡಾಕ್ಟರೇಟ್‌ಗೆ ಪಾತ್ರರಾಗಿದ್ದಾರೆ.
ಶಿವಮೊಗ್ಗದ ಸಾಗರ ತಾಲೂಕಿನ ಇರುವಕ್ಕಿ ಬಳಿ ಇರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಿಂದ ಮಾಜಿ ಸಿಎಂಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದ್ದು, ಕುಲಪತಿ ಡಾ ಆರ್.ಸಿ.ಜಗದೀಶ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ಈ ಸಮಾರಂಭದಲ್ಲಿ ಮೊದಲ ಬಾರಿಗೆ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ್ದ ಮಾಜಿ ಸಿಎಂ ಬಿಎಸ್ವೈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ಸಂಜೆ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಸುದೀರ್ಘ ರಾಜಕೀಯ ಅನುಭವವಿರುವ ಹಿರಿಯ ಮುತ್ಸದ್ಧಿ, ಧೀಮಂತ ನಾಯಕ, ರೈತಬಂಧುಗೆ ಡಾಕ್ಟರೇಟ್‌ಗೆ ಭಾಜನರಾಗಿದ್ದು, ರಾಜ್ಯ ಬಿಜೆಪಿಯು ಟ್ವೀಟ್ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದೆ.