ಮಣಿಪಾಲ: ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಲಕ್ಷ್ಮೀಂದ್ರ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರಿನಲ್ಲಿದ್ದವರ ಮಾಹಿತಿ ಲಭ್ಯವಿಲ್ಲ. ಡಿಕ್ಕಿಯ ರಭಸಕ್ಕೆ ಬೊನೆಟ್ ಮತ್ತು ಬಂಪರ್ ಕಿತ್ತು ಹೋಗಿದೆ. ಮಣಿಪಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.