ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಜಲಪಾತದಲ್ಲಿ ಬಿದ್ದು ಮೃತಪಟ್ಟ ದುರ್ಘಟನೆ ನಡೆದಿದೆ.
ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ದುರ್ಘಟನೆ ನಡೆದಿದೆ ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ
ಯುವಕ ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ
ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಪ್ರಕರಣ ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.