ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಿಗದಿಯಾಗಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿವಿ ಆಡಳಿತ ಮಂಡಳಿ ಹೇಳಿದೆ.ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ವಿವಿ ಸೋಮವಾರ ಪ್ರಕಟಣೆ ಹೊರಡಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ (ಜುಲೈ 25) ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ ಮಂಗಳೂರು ವಿಶ್ವ ವಿದ್ಯಾಲಯದ ನಿಗದಿಯಾಗಿದ್ದ (ಜುಲೈ 25) ಪರೀಕ್ಷೆಗಳನ್ನು ಮುಂದೂಡಲಾಗಿದೆ.