ಬೆಂಗಳೂರು : ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.ಉಡುಪಿಯ ಪ್ರತಿಷ್ಟಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ.
ಈ ಪ್ರಕರಣದ ವಿಚಾರವಾಗಿ ಸಾಮನ್ ಆಕ್ಸ್ಫರ್ಡ್ ಯುನಿವರ್ಸಿಟಿಯ ವಿದ್ಯಾರ್ಥಿ ನಾಯಕಿಯಾಗಿದ್ದ ರಶ್ಮಿ ಸಾಮಂತ್ ಟ್ವೀಟ್ ಮಾಡಿದ್ದು, ಉಡುಪಿಯಲ್ಲಿ ನಡೆದ ಈ ಘಟನೆಯ ಬಗ್ಗೆ ಯಾರು ಮಾತನಾಡುತ್ತಿಲ್ಲ ಯಾಕೆ? ಮೂವರು ಯುವತಿಯರು ಕಾಲೇಜು ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇರಿಸಿದ್ದಾರೆ. ಹಿಂದೂ ಹುಡುಗಿಯರ ವಿಡಿಯೋ ಮಾಡಲು ಕ್ಯಾಮೆರಾ ಇರಿಸಿದ್ದಾರೆ. ಬಳಿಕ ವಿಡಿಯೋ ಫೋಟೋ ತಮ್ಮ ಸಮುದಾಯದಲ್ಲಿ ಹಂಚಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಸುದ್ದಿಗೋಷ್ಠಿ ನಡೆಸಿದ್ದು, ರಶ್ಮಿ ಸಾವಂತ್ ಹೆಸರಿನಲ್ಲಿ ಟ್ವೀಟ್ ಬಗ್ಗೆ ಅಕೌಂಟ್ ಪರಿಶೀಲಿಸಿದ್ದೇವೆ. ಇದೇ ವಿಚಾರದಲ್ಲಿ ಅವರ ಮನೆಯವರ ಬಳಿ ಮಾತನಾಡಿದ್ದೇವೆ. ಯಾವುದೇ ದುರುದ್ದೇಶದಿಂದ ಮಾಹಿತಿ ಪಡೆದುಕೊಂಡದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಳೆದ ವಾರ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಚಾರವಾಗಿ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ. ವಿಚಾರದ ಜೊತೆ ಬೇರೆ ಬೇರೆ ಉದ್ದೇಶದಿಂದ ಮಾಹಿತಿಗಳು ಶೇರ್ ಆಗುತ್ತಿದೆ. ಹಿಡನ್ ಕ್ಯಾಮರಾ ಮೂಲಕ ವಿಡಿಯೋ ಚಿತ್ರೀಕರಿಸಿದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಬ್ಯ್ಲಾಕ್ಮೇಲ್ ಬಗ್ಗೆ ವಿಡಿಯೋ ಹರಿದಾಡಿದ ಬಗ್ಗೆ ಗಮನ ಹರಿಸಿದ್ದೇವೆ. ಬೇರೆ ಕಡೆ ವಿಡಿಯೋ ಶೇರ್ ಆಗುತ್ತಿದೆ, ವಾಯ್ಸ್ ಎಡಿಟ್ ಮಾಡಲಾಗಿದೆ. ಸತ್ಯಾಸತ್ಯತೆ ಗೊತ್ತಿಲ್ಲದೆ ಎಲ್ಲೆಡೆ ವಿಡಿಯೋ ಶೇರ್ ಮಾಡಿದರೆ ತಪ್ಪಾಗುತ್ತೆ. ವೈರಲ್ ಆಗಿರುವ ಬಗ್ಗೆ ಫೇಸ್ಬುಕ್, ವಾಟ್ಸಾಪ್ ಮೇಲೆ ನಿಗಾ ಇರಿಸಲಾಗಿದೆ ಎಂದಿದ್ದಾರೆ
ಸಾಮಾಜಿಕ ಹಿತಾಸಕ್ತಿಯಿಂದ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಯಾವುದೇ ಸುಳಿವು ಸಿಗುತ್ತಿಲ್ಲ. ಯುವತಿಯರ ಮೊಬೈಲ್ನಲ್ಲಿ ಯಾವುದೇ ಫೋಟೋ, ವಿಡಿಯೋ ಸಿಗ್ತಿಲ್ಲ. ಕಾಲೇಜು ನಿಯಮಾವಳಿ ಪ್ರಕಾರ ಅವರು ವಿಚಾರಣೆ ನಡೆಸಿದ್ದಾರೆ. ಫನ್ಗೋಸ್ಕರ ಇದೆಲ್ಲ ನಡೆದಿದೆ ಎಂದು ವಿದ್ಯಾರ್ಥಿನಿಯರು ಬರೆದುಕೊಟ್ಟಿದ್ದಾರೆ. ಬೇಡದ ವಿಚಾರ ಹರಿಬಿಟ್ಟು ಜನರ ಮನಸ್ಸಿನಲ್ಲಿ ಗೊಂದಲು ಸೃಷ್ಟಿಸುವುದು ಬೇಡ. ದಾಖಲೆ ಇದ್ದರೆ, ಪೊಲೀಸರಿಗೆ ನೀಡಿ ಸಹಕರಿಸಿ ಎಂದು ಎಸ್‌ಪಿ ಮನವಿ ಮಾಡಿದ್ದು, ತಪ್ಪು ಮಾಹಿತಿ ನೀಡಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ