ಮಂಗಳೂರು: ಕಾಳುಮೆಣಸು ದರ ಕೆಲ ದಿನಗಳ ಹಿಂದೆ ಕೆ.ಜಿ.ಗೆ 480ರಿಂದ 500 ರೂ. ಆಗಿತ್ತು ಇದೀಗ ದಿಢೀರ್ ಆಗಿ ಈಗ 600ರ ಗಡಿ ದಾಟಿದೆ. ಕಾಳುಮೆಣಸಿನ ಧಾರಣೆ ಏರಿಕೆ ಮಾರುಕಟ್ಟೆಯಲ್ಲಿ ಮುಂದುವರಿದಿದೆ.
ಕೇರಳದ ಕೊಚ್ಚಿ ಮಾರುಕಟ್ಟೆಯಲ್ಲಿ ಸತತವಾಗಿ ಏರುತ್ತಿದೆ.ಗುಣಮಟ್ಟದ ಕಾಳುಮೆಣಸಿಗೆ ಕೆ.ಜಿ.ಯೊಂದಕ್ಕೆ ಗರಿಷ್ಠ 570ರೂ. ಧಾರಣೆ ದೊರೆತಿದೆ ಎನ್ನಲಾಗಿದೆ.
ಕ್ಯಾಂಪ್ಕೋದಲ್ಲಿ 550 ರೂ ತನಕ ಧಾರಣೆ ಇತ್ತು. ಕಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ 40 ರಿಂದ 50 ರೂ ತನಕ ಧಾರಣೆ ಹೆಚ್ಚಿತ್ತು.
ಕಳೆದ ಮೂರು ವರ್ಷದಿಂದ 500ರ ಗಡಿ ದಾಟದೆ ಇದ್ದ ಕರಿಮೆಣಸಿನ ಧಾರಣೆ 2023ರ ಜುಲೈನಲ್ಲಿ 600ರ ಗಡಿ ದಾಟಿದ್ದು, ದರ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.