ಮಂಗಳೂರು : ಸಂಚಾರಿ ನಿಯಮ ಪಾಲಿಸದ ವಾಹನ ಚಾಲಕರಿಗೆ ಇದೀಗ ಪೊಲೀಸರು ತಿರುಗೆಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಈಗಾಗಲೇ 222 ಮಂದಿ ವಾಹನ ಚಾಲಕರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು RTO ಗೆ ಶಿಫಾರಸ್ಸು ಮಾಡಿದ್ದಾರೆ.
ಸಂಚಾರಿ ನಿಯಮ ಪಾಲಿಸದೇ ಎಸ್ಕೇಪ್ ಆಗುತ್ತಿದ್ದವರಿಗೆ ಇದು ಶಾಕಿಂಗ್ ನ್ಯೂಸ್ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 14 ದಿನದಲ್ಲಿ ಅಂದರೆ ಜುಲೈ 13 ರಿಂದ ಜುಲೈ 26 ರವರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿರುವ ಹಾಗೂ ಸಂಚಾರ ನಿಯಮ ಪಾಲನೆ ಮಾಡದೇ ಇರುವ ವಾಹನ ಚಾಲಕರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸು ಮಾಡಿದ್ದಾರೆ. ಸದ್ಯ 222 ಚಾಲಕರ ಡಿಎಲ್ ರದ್ದು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ.