ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಎಸ್ಪಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ’ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿಯ ಬಳಿ . ‘ಪ್ರತಿಭಟನಾ ಸಭೆ’ ನಡೆಸಿ ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸುವ ಮೂಲಕ ಮನವಿ’ಯನ್ನು ಸಲ್ಲಿಸಲಾಗುವುದು
ಬಿಜೆಪಿ ಕಚೇರಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಸುಮಾರು 800ಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.