ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್‌ನ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಆ. 4 ರಂದು ನಡೆಯಲಿದೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ ಉದ್ಘಾಟಿಸಲಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿರಲಿದ್ದಾರೆ. ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಕುಕ್ಕುಂದೂರು ಗ್ರಾ. ಪಂ. ಅಧ್ಯಕ್ಷೆ ಶಶಿಮಣಿ ಸಂಪತ್, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ. ಟಿ. ರೇಜು, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ. ಹಾಕಿ, ಅಪರ ಜಿಲ್ಲಾಧಿಕಾರಿ అ ವೀಣಾ ಬಿ. ಎನ್., ಕಾರ್ಕಳ ತಾಲೂಕು ತಹಶೀಲ್ದಾರ್ ಅನಂತ್ ಶಂಕರ್ ಬಿ., ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗುರುದತ್ ಎಂ. ಎನ್. ಭಾಗಿಯಾಗಲಿದ್ದಾರೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.