ನಿಗದಿಯಂತೆ ನಾಳೆಯಿಂದ ( ಆಗಸ್ಟ್ 1) ಹಾಲಿನ ದರ ಹೆಚ್ಚಳವಾಗಲಿದೆ. ಹಾಲು ಉತ್ಪಾದಕರ ಅಗತ್ಯತೆಗಳನ್ನು ಉಲ್ಲೇಖಿಸಿ ಆಗಸ್ಟ್ 1 ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವನ್ನು ಸರ್ಕಾರ ಘೋಷಿಸಿದೆ. ಇದರನ್ವಯ ನಾಳೆಯಿಂದ ಕರ್ನಾಟಕ ಹಾಲು ಒಕ್ಕೂಟದ ( ಕೆಎಂಎಫ್ ) ನಂದಿನಿ ಹಾಲಿನ ಬೆಲೆಯನ್ನು ಲೀಟರ್‌ಗೆ ಮೂರು ರೂಪಾಯಿಗಳಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.
ಕರ್ನಾಟಕದಲ್ಲಿ ಕಡಿಮೆ ದರದಲ್ಲಿ ಹಾಲು ಮಾರಾಟವಾಗುತ್ತಿದ್ದು, ಇತರ ರಾಜ್ಯಗಳಲ್ಲಿ ಹಾಲು ಇನ್ನೂ ಅಧಿಕ ದರದಲ್ಲಿ ಮಾರಾಟವಾಗುತ್ತಿದೆ ಎಂದು ಸಿ ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಗಸ್ಟ್ 1ರಿಂದ ನಂದಿನಿ ಹಾಲು 39 ರೂ.ಗಳ ಬೆಲೆಯ ಹಾಲು (ಟೋನ್ಡ್) ಲೀಟರ್‌ಗೆ 42 ರೂ.ಗೆ ಮಾರಾಟವಾಗಲಿದೆ. ಇನ್ನುಳಿದಂತೆ ಹಾಲಿನ ಮಾದರಿಗೆ ಅನುಗುಣವಾಗಿ ಎಲ್ಲಾ ರೀತಿಯ ಹಾಲಿನ ದರದಲ್ಲಿ ಲೀಟರ್‌ಗೆ 3 ರೂ. ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ. ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.