ಪಡುಬಿದ್ರೆ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಡುಬಿದ್ರಿಯಲ್ಲಿ ಕಡಲ್ಕೋರೆತ ತೀವ್ರಗೊಂಡ ಪ್ರದೇಶಕ್ಕೆ ಇಂದು ಭೇಟಿ ನೀಡಲಿದ್ದಾರೆ.
ಆ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಕಿ ಅಕ್ಷಯ್ ಮಚ್ಚೇಂದ್ರ ಮತ್ತು ಜಿಲ್ಲಾಡಳಿತದ ತಂಡ ಸ್ಥಳ ಪರಿಶೀಲನೆ ನಡೆಸಿದೆ.
ಸಿ ಎಂ ಭೇಟಿ ಹಿನ್ನೆಲೆಯಲ್ಲಿ ಸಮುದ್ರ ಕಿನಾರೆಯಲ್ಲಿ ಪೊಲೀಸರ ಗಸ್ತು ಹಾಕಲಾಗಿದೆ. 500ಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.