ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನಟ ಶಿವರಾಜ್ಕುಮಾರ್ ನೇಮಕವಾಗಿದ್ದಾರೆ. ಕೆಎಂಎಫ್ ಅಧ್ಯಕ್ಷ ಭೀಮ ನಾಯಕ್ ಹಾಗೂ ಎಂಡಿ ಜಗದೀಶ್ ಅವರ ಮನವಿಗೆ ಸ್ಪಂದಿಸಿದ ಶಿವರಾಜ್ಕುಮಾರ್ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.
ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಅವರು ಶಿವರಾಜ್ ಕುಮಾರ್ ಅವರಿಗೆ ನಂದಿನಿ ಉತ್ಪನ್ನಗಳ ರಾಯಭಾರಿಯಾಗುವಂತೆ ಮನವಿ ಮಾಡಿದ್ದರು ಇದೀಗ ಮನವಿಗೆ ಮನವಿಗೆ ನಟ ಶಿವರಾಜಕುಮಾರ್ ಸ್ಪಂದಿಸಿದ್ದು, ಶಿವಣ್ಣ ಅವರಿಗೆ KMFಅಧ್ಯಕ್ಷ ಭೀಮಾನಾಯ್ಕ್ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಕರ್ನಾಟಕ ರತ್ನ ಅಭಿಮಾನಿಗಳ ದೇವರು ಡಾ. ಪುನೀತ್ ರಾಜಕುಮಾರ್ ಅವರು ಕೂಡ ಹಲವು ವರ್ಷಗಳ ಕಾಲ ನಮ್ಮ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿರಲಿಲ್ಲ ಎಂಬ ಸುದ್ದಿ ಅವರ ಸಾವಿನ ಬಳಿಕ ಕೇಳಿ ಬಂದಿತ್ತು. ಇದೀಗ ಅಂತಹದ್ದೇ ಮತ್ತೊಂದು ಮಹತ್ವದ ಕಾರ್ಯಕ್ಕೆ ದೊಡ್ಮನೆ ಮುಂದಾಗಿದ್ದು, ಕರುನಾಡ ಅನ್ನದಾತರ ಬೆನ್ನಿಗೆ ನಿಲ್ಲಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಂದಾಗಿದ್ದಾರೆ.