ಮಂಗಳೂರು: . ಜು.31ರಿಂದ ಆಗಸ್ಟ್ 5ರ ವರೆಗೆ ಹಮ್ಮಿಕೊಳ್ಳಲಾಗಿದ ನಾಗರೀಕ ವಿಮಾನ ಯಾನ ಸುರಕ್ಷತಾ ದಳದಿಂದ ದೇಶದಾದ್ಯಂತ ನಾಗರೀಕ ವಿಮಾನ ಯಾನ ಸುರಕ್ಷತಾ ಸಪ್ತಾಹಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಏರ್ ಪೋಟ್೯ ಅಧಿಕಾರಿಗಳು ಹಾಗೂ ಮುಖಂಡರಿದ್ದರು
ವಿಮಾನಯಾನ, ಭದ್ರತೆ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆಗಳನ್ನು ಸಪ್ತಾಹದಲ್ಲಿ ಆಯೋಜಿಸಲಾಗುತ್ತದೆ. ಇದು ಪ್ರಯಾಣಿಕರಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲು ಮತ್ತು ಪ್ರಯಾಣಿಕರು ಮತ್ತು ವಾಯುಯಾನ ಸಿಬ್ಬಂದಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.