ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ.
ಈ ಸಂದರ್ಭ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳಿಗೆ ಮೈಸೂರು ಪೇಟ ತೊಡಿಸಿ. ವಿಶೇಷ ಮರದ ಸ್ಮರಣಿಕೆಯನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ.
ತಮ್ಮ ಹುಟ್ಟು ಹಬ್ಬದ ದಿನದಂದೇ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ವಿಶೇಷವಾಗಿತ್ತು. ಬಳಿಕ ಇಬ್ಬರೂ ಸೌಹಾರ್ದಯುತವಾಗಿ ಮಾತುಕತೆ ನಡೆಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ