ಬೆಂಗಳೂರು : ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಘೋಷಣೆ ಮಾಡಿದರು.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಅಲ್ಲದೆ ಯಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ.
ದುಡಿಮೆಗಾಗಿ ಕಾರು ಖರೀದಿಸಿದವರ ಕಾರ್ಡ್ ನ್ನು ರದ್ದು ಮಾಡಲಾಗುವುದಿಲ್ಲ. ಸ್ವಂತ ಕಾರು ಯಾರು ಹೊಂದಿರುತ್ತಾರೆ ಅವರಿಗೆ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಲಾಗುವುದು ಎಂದು ಆಹಾರ ಸಚಿವ ಘೋಷಿಸಿದ್ದಾರೆ.
ಇದೇ ವೇಳೆ ಅವರು ಹೊಸದಾಗಿ BPL, APL ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಮಾಡುವುದನ್ನು ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅಂತ ತಿಳಿಸಿದರು.