ಬ್ರಹ್ಮಾವರದಲ್ಲಿ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆ ಇಂದು ( ಆ. 5) ಬೆಳಗ್ಗೆ 10.30ಕ್ಕೆ ನೆರವೇರಿತು
ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ನ್ಯಾಯಾಂಗ ಕಟ್ಟಡ ಸಮಿತಿ ಅಧ್ಯಕ್ಷ ಪಿ.ಎಸ್. ದಿನೇಶ್ ಕುಮಾರ್ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟಿಸಿದರು
ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ ಬ್ರಹ್ಮಾವರದ ಆಶ್ರಯದಲ್ಲಿ ಕಾರ್ಯಕ್ರಮ ನಡೆದಿದ್ದು , ಬ್ರಹ್ಮಾವರ ಬಂಟರ ಭವನದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು .
ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ. ಅರುಣ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿ ಗಳಾಗಿ ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಸಚಿವ ಎಚ್.ಕೆ. ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉಪಸ್ಥಿತರಿದ್ದರು