ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ. ಥೈಲ್ಯಾಂಡ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.
ನಾಳೆ ಸ್ಪಂದನಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದೆ.