ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢಶಾಲೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳದ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಿದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅನ್ವಿ ಎಚ್. (8ನೇ ತರಗತಿ) ಹಾಗೂ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅಗ್ನಿ ಕೋಟ್ಯಾನ್ (9ನೇ ತರಗತಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ದಿನೇಶ್ ಎಂ. ಕೊಡವೂರು, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಉಷಾ ರಾವ್ ಯು., ಸಹ ಮುಖ್ಯ ಶಿಕ್ಷಕಿ ವಾಣಿ ಕೆ. ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.